ಹಾಯ್ ಬೆಂಗಳೂರ್

ಎರಡನೇ ಬಾರಿಗೆ ಸಿಎಂಗೆ ಅಂಟಿಕೊಂಡ ಕೊರೋನಾ: ಮಣಿಪಾಲ್ ಆಸ್ಪತ್ರೇಲಿ ಚಿಕಿತ್ಸೆ

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು ಸದ್ಯ ಅವರನ್ನು ಬೆಂಗಳೂರಿನ ಪ್ರತಿಷ್ಠಿತ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದಕ್ಕಿಂತ ಮೊದಲು ಕಳೆದ ವರ್ಷ ಕೂಡ ಅವರಿಗೆ ಕೊರೋನಾ ಕಾಣಿಸಿಕೊಂಡಿತ್ತು. ಆಗಲೂ ಅವರನ್ನು ಇದೇ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ಈ ಕುರಿತು ಸ್ವತಃ ಯಡಿಯೂರಪ್ಪನವರೇ ಟ್ವೀಟ್ ಮಾಡಿದ್ದಾರೆ. ನನಗೆ ಎರಡನೇ ಬಾರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದೇನೆ. ದಯಮಾಡಿ ನನ್ನ ಜೊತೆ ಸಂಪರ್ಕದಲ್ಲಿದ್ದವರೆಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಅಂತ ಮತ್ತೊಂದು ಟ್ವೀಟ್ ಸಹ ಮಾಡಿದ್ದಾರೆ.

ಯಡಿಯೂರಪ್ಪನವರು ಆದಷ್ಟು ಬೇಗ ಗುಣಮುಖರಾಗಿ ಎಂದಿನಂತೆ ತಮ್ಮ ಆಡಳಿತದಲ್ಲಿ ತೊಡಗಿಸಿಕೊಳ್ಳಲಿ ಅಂತ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಇನ್ನು ಕೆ.ಪಿ.ಸಿ.ಸಿ. ಕಚೇರಿಯಿಂದಲೂ ಯಡಿಯೂರಪ್ಪನವರ ಆರೋಗ್ಯ ಚೇತರಿಕೆಯಾಗಲಿ ಅಂತ ಎಲ್ಲರೂ ಹಾರೈಸಿದ್ದಾರೆ.

 

Leave a Reply

Your email address will not be published. Required fields are marked *